ಕಾರು ಡಿಕ್ಕಿ; ರಸ್ತೆ ದಾಟುತ್ತಿದ್ದ 3 ವರ್ಷದ ಬಾಲಕ ಮೃತ್ಯು
Wednesday, December 03, 2025
ಮನೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಡಿ.3ರಂದು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯಲ್ಲಿ ಸಂಭವಿಸಿದೆ.
ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಅವರ ಮೂರು ವರ್ಷದ ಪುತ್ರ ಮುಹಮ್ಮದ್ ಹಝೀರಿನ್ ಮೃತ ಬಾಲಕ.
ತನ್ನ ಮನೆಯ ಬಳಿಯ ಅಂಗಡಿಗೆ ತಿಂಡಿ ತರಲು ಹೋಗಿ, ಹಿಂದಿರುಗುವಾಗ ರಸ್ತೆ ದಾಟಲು ಪ್ರಯತ್ನಿಸುವ ವೇಳೆ ಕಾರು ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಬಾಲಕ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.