ವಿಧಾನ ಪರಿಷತ್ ಚುನಾವಣೆ; 4 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ
Tuesday, December 30, 2025
ರಾಜ್ಯ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗಳಿಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳನ್ನು ಇಂದು (ಡಿ.30) ಘೋಷಿಸಿದೆ.
ವಿಧಾನ ಪರಿಷತ್ತಿನ 4 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ. 2026ರ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ.
ಪಶ್ಚಿಮ ಪದವೀದರ ಕ್ಷೇತ್ರ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವೀಧರ ಕ್ಷೇತ್ರ ಶಶಿ ಹುಲಿಕುಂಟೆಮಠ, ಈಶಾನ್ಯ ಶಿಕ್ಷಕರ ಕ್ಷೇತ್ರ ಶರಣಪ್ಪ ಮತ್ತೂರ್, ಬೆಂಗಳೂರು ಶಿಕ್ಷಕರ ಕ್ಷೇತ್ರ ಪುಟ್ಟಣ್ಣ ಅವರ ಹೆಸರನ್ನು ಘೋಷಿಸಲಾಗಿದೆ.