-->
ಡಿ. 4ರಂದು ಕೋಟೇಶ್ವರ ಗ್ರಾಮದಲ್ಲಿ ವೈನ್ ಶಾಪ್ ಬಂದ್; ಡಿಸಿ ಆದೇಶ

ಡಿ. 4ರಂದು ಕೋಟೇಶ್ವರ ಗ್ರಾಮದಲ್ಲಿ ವೈನ್ ಶಾಪ್ ಬಂದ್; ಡಿಸಿ ಆದೇಶ


ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ರಥೋತ್ಸವ ಹಾಗೂ ಕೊಡಿಹಬ್ಬದ ಹಿನ್ನೆಲೆಯಲ್ಲಿ ಡಿ.4ರ ಬೆಳಗ್ಗೆ 6 ಗಂಟೆಯಿಂದ ಡಿ.5ರ ಬೆಳಗ್ಗೆ 6 ಗಂಟೆವರೆಗೆ ಕೋಟೇಶ್ವರ ಗ್ರಾಮದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಜಾತ್ರೋತ್ಸವದ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಅಪರಾಧ ಕೃತ್ಯಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮದ್ಯದ ಅಂಗಡಿಗಳನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರು ಆದೇಶ ಹೊರಡಿಸಿದ್ದಾರೆ.

ಡಿ.4ರ ಬೆಳಗ್ಗೆ 6 ಗಂಟೆಯಿಂದ ಡಿ.5ರ ಬೆಳಗ್ಗೆ 6 ಗಂಟೆವರೆಗೆ ಡ್ರೈ ಡೇ ಎಂದು ಘೋಷಿಸಿದ್ದು, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ 1965ರ ನಿಯಮ 21ರ ಅನ್ವಯ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.



Ads on article

Advertise in articles 1

advertising articles 2

Advertise under the article