-->
ಉದ್ಯಾವರ: ಸಾಮಾಜಿಕ ಕಾರ್ಯಕರ್ತೆ ಹೆಲೆನ್ ಫೆರ್ನಾಂಡಿಸ್ ನಿಧನ

ಉದ್ಯಾವರ: ಸಾಮಾಜಿಕ ಕಾರ್ಯಕರ್ತೆ ಹೆಲೆನ್ ಫೆರ್ನಾಂಡಿಸ್ ನಿಧನ


ಉಡುಪಿ ಉದ್ಯಾವರದ ಸಾಮಾಜಿಕ ಕಾರ್ಯಕರ್ತೆ, ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಹೆಲೆನ್ ಫೆರ್ನಾಂಡಿಸ್ ಉದ್ಯಾವರ ಇಂದು ಬೆಳಗ್ಗೆ ಹೃದಯಾಘಾತದಿಂದ ಕುಸಿದು ಬಿದ್ದು ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು.

ಉದ್ಯಾವರ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಹಲವಾರು ವರ್ಷ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ಇವರು, ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಇದರ ಸದಸ್ಯೆಯಾಗಿದ್ದು, ಹಲವಾರು ಹುದ್ದೆಗಳನ್ನು ಸಕ್ರಿಯವಾಗಿ ನಿಭಾಯಿಸಿದ್ದಾರೆ. ಪ್ರಸ್ತುತ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಉದ್ಯಾವರ ಚರ್ಚಿನ ವಿವಿಧ ಸಂಘ-ಸಂಸ್ಥೆಗಳಲ್ಲಿ  ಮತ್ತು ವಿಶೇಷವಾಗಿ ಪಾಲನ ಮಂಡಳಿಯಲ್ಲಿಯೂ ಸೇವೆ ಸಲ್ಲಿಸಿದ್ದರು. ಮೂವರು ಪುತ್ರರು ಮತ್ತು ಅಪಾರ ಬಂಧು ಬಳಗದವರನ್ನು ಆಗಲಿದ್ದಾರೆ.

Ads on article

Advertise in articles 1

advertising articles 2

Advertise under the article