ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಗೀತೋತ್ಸವದಲ್ಲಿ ಭಾಗಿಯಾಗಲು ನಟ, ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಇಂದು ಉಡುಪಿಗೆ ಭೇಟಿ ನೀಡಿದ್ದಾರೆ. ಉಡುಪಿಯ ಪ್ರವಾಸಿ ಬಂಗಲೆಗೆ ಆಗಮಿಸಿದ ಪವನ್ ಕಲ್ಯಾಣ್ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಈ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.