ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಪೊಲೀಸ್ ಇಲಾಖೆಗೆ ಬೊಲೆರೋ ವಾಹನ ಹಸ್ತಾಂತರ
Saturday, December 06, 2025
ಉಡುಪಿಯ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಕೊಡುಗೆಯಾಗಿ ನೀಡಿದ ಬೊಲೆರೋ ವಾಹನದ ಹಸ್ತಾಂತರ ಕಾರ್ಯಕ್ರಮವು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆಯಿತು.
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಅವರು ಹಸಿರು ನಿಶಾನೆ ತೋರಿಸಿ, ಬಳಿಕ ಕೀಲಿ ಕೈಯನ್ನು ಉಡುಪಿ ಎಸ್ಪಿ ಹರಿರಾಂ ಶಂಕರ್ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಮಾತನಾಡಿದ ಎಂ.ಎನ್ ರಾಜೇಂದ್ರ ಕುಮಾರ್ ಅವರು, ಎಲ್ಲಾ ಸರ್ಕಾರಿ ಕೆಲಸಗಳಿಗಿಂತಲೂ ಪೊಲೀಸ್ ಇಲಾಖೆ ಅತ್ಯಂತ ಕಷ್ಟಕರವಾಗಿ ಕೆಲಸ ನಿರ್ವಹಿಸುವ ಇಲಾಖೆ. ಎಲ್ಲೇ ಕೊಲೆ ಕಳ್ಳತನ ಸುಲಿಗೆ ನಡೆದರೂ ಶಾಂತಿಯುವಾಗಿ ನಾಗರಿಕರು ಬದುಕುವಂತಾಗಲು ಶ್ರಮಿಸುವ ಇಲಾಖೆ ಪೊಲೀಸ್ ಇಲಾಖೆ. ಹಾಗಾಗಿ ಪೊಲೀಸ್ ಇಲಾಖೆಗೆ ವಾಹನದ ಅವಶ್ಯಕತೆಯನ್ನು ಮನಗಂಡು ಬೊಲೆರೋ ವಾಹನವನ್ನು ಕೊಡುಗೆಯಾಗಿ ನೀಡಿದ್ದೇವೆ ಎಂದರು.
ಈ ವೇಳೆ ಎಸ್ಪಿ ಹರಿರಾಂ ಶಂಕರ್ ಅವರು ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಈ ವೇಳೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.