ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾ
Tuesday, December 09, 2025
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಂಡಿದೆ.
ಡಿ. 8ರಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿನಯ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಸಾಕ್ಷಿಗಳ ಮೇಲೆ ಒತ್ತಡ ಹಾಕಿದ್ದ ಆರೋಪದಲ್ಲಿ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ. ಈ ಮೂಲಕ ಸಚಿವ ಸಂಪುಟ ಪುನರ್ ರಚನೆ ವೇಳೆ ಸಚಿವರಾಗುವ ಕನಸು ಕಂಡಿದ್ದ ವಿನಯ್ ಕುಲಕರ್ಣಿ ಕನಸು ಭಗ್ನಗೊಂಡಿದೆ.