-->
 ಯುಪಿಯಂತೆ ಕರ್ನಾಟಕದಲ್ಲೂ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆ ಧ್ವಂಸ- ಪಿಣರಾಯಿ ವಿಜಯನ್

ಯುಪಿಯಂತೆ ಕರ್ನಾಟಕದಲ್ಲೂ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆ ಧ್ವಂಸ- ಪಿಣರಾಯಿ ವಿಜಯನ್


ಕರ್ನಾಟಕದಲ್ಲಿ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಯಲಹಂಕ ಕೋಗಿಲು ಲೇಔಟ್ ಬಳಿ ಸರ್ಕಾರದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನೆಲ ಸಮ ಮಾಡಿದ್ದರು. ಈ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡ ಪಿಣರಾಯಿ ವಿಜಯನ್, ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳ ಮನೆಗಳನ್ನು ಧ್ವಂಸ ಮಾಡಿದ್ದು ಅತ್ಯಂತ ಆಘಾತಕಾರಿ ಮತ್ತು ನೋವಿನ ಸಂಗತಿ. ಉತ್ತರ ಭಾರತದಲ್ಲಿ ಸಂಘ ಪರಿವಾರ ಅನುಸರಿಸುತ್ತಿರುವ ಅಲ್ಪಸಂಖ್ಯಾತ ವಿರೋಧಿ ಆಕ್ರಮಣಕಾರಿ ರಾಜಕೀಯದ ಮತ್ತೊಂದು ಆವೃತ್ತಿಯನ್ನು ಕರ್ನಾಟಕದಲ್ಲಿಯೂ ಕಾಣಬಹುದು ಎಂದು ಸಿಟ್ಟು ಹೊರಹಾಕಿದ್ದಾರೆ. 

ಕೊರೆಯುವ ಚಳಿ ಇರುವಾಗ ಇವರನ್ನು ಹೊರದಬ್ಬಲಾಗಿದೆ. ಉತ್ತರ ಭಾರತದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದ ರಾಜಕೀಯ ದಾಳಿ ಈಗ ದಕ್ಷಿಣಕ್ಕೂ ಬಂದಿದೆ. ಈ ಕ್ರಮವನ್ನು ಕಾಂಗ್ರೆಸ್ ಸರ್ಕಾರ ಯಾವ ರೀತಿ ಸಮರ್ಥಿಸಿಕೊಳ್ಳುತ್ತದೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ಸಿನ ಈ ಕಪಟ ಪ್ರವೃತ್ತಿಯನ್ನು ವಿರೋಧಿಸಲು ಮತ್ತು ಸೋಲಿಸಲು ಎಲ್ಲಾ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಟ್ಟಾಗಿ ಒಟ್ಟುಗೂಡಬೇಕು ಎಂದು ಕರೆ ನೀಡಿದ್ದಾರೆ.



Ads on article

Advertise in articles 1

advertising articles 2

Advertise under the article