-->
 ಹೊಸ ವರ್ಷಾಚರಣೆ ಹಿನ್ನೆಲೆ: ನಂದಿಬೆಟ್ಟಕ್ಕೆ ಪ್ರವೇಶ ನಿಷಿದ್ಧ

ಹೊಸ ವರ್ಷಾಚರಣೆ ಹಿನ್ನೆಲೆ: ನಂದಿಬೆಟ್ಟಕ್ಕೆ ಪ್ರವೇಶ ನಿಷಿದ್ಧ


ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

 2025ರ ಡಿಸೆಂಬರ್ 31ರ ಮಧ್ಯಾಹ್ನ 2 ಗಂಟೆಯಿOದ ಜನವರಿ 1, 2026 ರಂದು ಬೆಳಿಗ್ಗೆ 10 ಗಂಟೆಯವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಅವಧಿಯಲ್ಲಿ ಗಿರಿಧಾಮದಲ್ಲಿ ಅತಿಥಿ ಕೊಠಡಿಗಳಿಗೆ ಮುಂಗಡ ಬುಕಿಂಗ್ ಹೊಂದಿರುವ ಪ್ರವಾಸಿಗರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿರುತ್ತದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.



Ads on article

Advertise in articles 1

advertising articles 2

Advertise under the article