ತೆಂಗಿನಎಣ್ಣೆ ಮಿಲ್ ನಲ್ಲಿ ಬೆಂಕಿ ಅವಘಡ ; ಲಕ್ಷಾಂತರ ರೂ. ನಷ್ಟ
Saturday, December 06, 2025
ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದಾಗಿ ಕೊಕ್ಕರ್ಣೆ ಪೇಟೆಯಲ್ಲಿರುವ ತೆಂಗಿನ ಎಣ್ಣೆ ಮಿಲ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟುಕರಕಲಾದ ಘಟನೆ ನಡೆದಿದೆ.
ಘಟನೆಯಲ್ಲಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದ, ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮೊದಲು ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಕ್ರಮೇಣ ಇಡೀ ಫ್ಯಾಕ್ಟರಿಯನ್ನು ಆವರಿಸಿತು. ಈ ವೇಳೆ ಫ್ಯಾಕ್ಟರಿಯಲ್ಲಿ ದಾಸ್ತಾನು ಇರಿಸಿದ್ದ ತೆಂಗಿನ ಎಣ್ಣೆ ಮತ್ತು ಕೊಬ್ಬರಿ ಬೆಂಕಿಗೆ ಆಹುತಿಯಾಗಿದ್ದು, ಬೆಂಕಿಯ ಕೆನ್ನಾಲೆಗೆಗೆ ಫ್ಯಾಕ್ಟರಿಯ ಬಹುಭಾಗ ಸುಟ್ಟು ಕರಕಲಾಗಿದೆ.
