ಮಾದಕ ವಸ್ತು ಮಾರಾಟಕ್ಕೆ ಯತ್ನ; ಓರ್ವ ಆರೋಪಿಯ ಬಂಧನ
Thursday, December 04, 2025
ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರದ ರೈಲ್ವೇ ಸೇತುವೆ ಬಳಿ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪುತ್ತೂರು ತಾಲೂಕಿನ ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂದು ಗುರುತಿಸಲಾಗಿದೆ.
ಪುತ್ತೂರು ನಗರ ಪೊಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಬಂಧಿತನಿಂದ ದ್ವಿಚಕ್ರ ವಾಹನ ಹಾಗೂ 10 ಗ್ರಾಂ MDMA ಎಂಬ ನಿಷೇಧಿತ ಮಾದಕವಸ್ತುವನ್ನು ವಶಕ್ಕೆ ಪಡೆಯಲಾಗಿದೆ.
NDPS ಕಾಯ್ದೆ ಕಲಂ 8(C), 22(b) ಅಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 119/2025ರಲ್ಲಿ ಪ್ರಕರಣ ದಾಖಲಾಗಿದೆ.