ಹೊಸ ವರ್ಷಾಚರಣೆ ಹಿನ್ನೆಲೆ; ಸುರಕ್ಷತಾ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ
ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಕೆಲವೊಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.
* ಪೊಲೀಸ್ ಸೂಚನೆಗಳನ್ನು ಪಾಲಿಸಿ: ಪೊಲೀಸರು ನೀಡುವಂತೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.
* ಜನಸಂದಣಿ ಬಗ್ಗೆ ಎಚ್ಚರವಿರಲಿ: ಅತೀಯಾದ ಜನದಟ್ಟಣೆ ಪ್ರದೇಶದಲ್ಲಿ ನೂಕು ನುಗ್ಗಲು ಸಂಭವಿಸುವ ಸಾಧ್ಯತೆ ಇದೆ. ಅಲ್ಲದೇ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜನದಟ್ಟಣೆ ಪ್ರದೇಶಗಳಲ್ಲಿ ಜಾಗರೂಕರಾಗಿರುವಂತೆ ಪೊಲೀಸರು ತಿಳಿಸಿದ್ದಾರೆ.
* ಅನುಮಾನಾಸ್ಪದ ಚಟುವಟಿಕೆ ವರದಿ ಮಾಡಿ: ಯಾವುದೇ ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು ಕಂಡು ಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
* ನಿಷೇಧಿತ ವಸ್ತುಗಳನ್ನು ತರಬೇಡಿ: ಆಯುಧಗಳು ಸೇರಿದಂತೆ ಕಾನೂನು ಬಾಹಿರ ವಸ್ತುಗಳನ್ನು ಸಾರ್ವಜನಿಕ ಸ್ಥಳಗಳಿಗೆ ತರಬೇಡಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
* ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ: ವಾಹನ ಚಲಾಯಿಸುವ ವೇಳೆ ಮದ್ಯಪಾನ ಮಾಡಿಕೊಂಡು ವಾಹನ ಚಾಲನೆ ಮಾಡುವುದು ಅಪಾಯ ಹಾಗೂ ಅಪರಾಧ. ಹಾಗಾಗಿ ಮದ್ಯಪಾನ ಮಾಡಿ ವಾಹನ ಚಲಾಯಿಸಬೇಇ ಎಂದು ಪೊಲೀಸರು ಸೂಚಿಸಿದ್ದಾರೆ.
* ಮಕ್ಕಳ ಬಗ್ಗೆ ನಿಗಾ ವಹಿಸಿ: ಹೊಸ ವರ್ಷಾಚರಣೆ ವೇಳೆ ಮಕ್ಕಳ ಸುರಕ್ಷತೆ ಬಗ್ಗೆ ಗಮನವಿರಲಿ. ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳನ್ನು ಹತ್ತಿರವೇ ಇಟ್ಟುಕೊಳ್ಳುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
* ಸಾರ್ವಜನಿಕ ಆಸ್ತಿಯನ್ನು ರಕ್ಷಿಸಿ: ಹೊಸ ವರ್ಷಾಚರಣೆ ಮೋಜು ಮಸ್ತಿಯಲಿ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಮಾಡದಂತೆ ಪೊಲೀಸರು ತಿಳಿಸಿದ್ದಾರೆ.
* ಸದಾ ಜಾಗರೂಕರಾಗಿ: ಹೊಸ ವರ್ಷಾಚರಣೆ ವೇಳೆ ನಿಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಸದಾ ಎಚ್ಚರದಿಂದ ಇರುವಂತೆ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.