-->
 ಮಂಗಳೂರು ಜೈಲಿಗೆ ದಿಢೀರ್ ದಾಳಿ; ಮೊಬೈಲ್, ಸಿಮ್ ಕಾರ್ಡ್ ಪತ್ತೆ

ಮಂಗಳೂರು ಜೈಲಿಗೆ ದಿಢೀರ್ ದಾಳಿ; ಮೊಬೈಲ್, ಸಿಮ್ ಕಾರ್ಡ್ ಪತ್ತೆ


ಮಂಗಳೂರಿನ ಕಾರಾಗೃಹಕ್ಕೆ ತಡರಾತ್ರಿ ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿಗಳು ದಿಢೀರ್ ದಾಳಿ ನಡೆಸಿದ್ದಾರೆ. 

ಈ ವೇಳೆ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜರ್ ಜಪ್ತಿ ಮಾಡಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಕಾರಾಗೃಹದಲ್ಲಿ ಈ ವಸ್ತುಗಳು ನಿಷೇಧಿತವಾಗಿರುವುದರಿಂದ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ನೀಡಿ ಪ್ರಕರಣ ದಾಖಲಿಸಲಾಗಿದೆ. ಕಾರಾಗೃಹ ಇಲಾಖೆಯ ಮುಖ್ಯಸ್ಥ ಅಲೋಕ್ ಕುಮಾರ್ ಇವರಿಗೆ ದೂರವಾಣಿ ಮುಖಾಂತರ ವಿಷಯವನ್ನು ತಿಳಿಸಲಾಗಿದೆ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ತಿಳಿಸಿದ್ದಾರೆ. 



Ads on article

Advertise in articles 1

advertising articles 2

Advertise under the article