ಕುಂದಾಪುರದಲ್ಲಿ ಬೆಂಕಿ ಅವಘಡ: ಸ್ಥಳಕ್ಕೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ
Monday, December 29, 2025
ಕುಂದಾಪುರ ಪೇಟೆಯ ಹೃದಯಭಾಗವಾದ ರಥಬೀದಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಹಲವು ವ್ಯಾಪಾರ ಮಳಿಗೆಗಳು ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಭೇಟಿ ನೀಡಿದರು.
ಅಂಗಡಿ ವರ್ತಕರಲ್ಲಿ ಧೈರ್ಯ ತುಂಬಿದ ಅವರು ದುರಂತದಿಂದ ಸಂಭವಿಸಿದ ನಷ್ಟಕ್ಕೆ ಸಂತಾಪ ವ್ಯಕ್ತಪಡಿಸಿದರು. ಸರ್ಕಾರದ ಮಟ್ಟದಲ್ಲಿ ಸಾಧ್ಯವಿರುವ ಎಲ್ಲಾ ರೀತಿಯ ನೆರವು ಹಾಗೂ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಂಜುನಾಥ ಭಂಡಾರಿ ಅವರು ಭರವಸೆ ನೀಡಿದರು.
ಕುಂದಾಪುರದ ವೆಂಕಟರಮಣ ದೇವಸ್ಥಾನದ ಎದುರಿನ ಕಟ್ಟಡದಲ್ಲಿ ಬೆಳಗಿನ ಜಾವ ಈ ಅವಘಡ ಸಂಭವಿಸಿದ್ದು, ಅಂಗಡಿಗಳಲ್ಲಿದ್ದ ವಸ್ತುಗಳು, ಫರ್ನಿಚರ್, ವಿದ್ಯುತ್ ಉಪಕರಣಗಳು ಹಾಗೂ ನಗದು ಸಂಪೂರ್ಣವಾಗಿ ಹಾನಿಗೊಳಗಾದಿವೆ. ಘಟನೆಯಿಂದಾಗಿ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ.
