ಮುಟ್ಟಿನ ರಜೆ; ರಾಜ್ಯಸರ್ಕಾರದ ಅಧಿಸೂಚನೆಗೆ ವಿಧಿಸಿದ್ದ ಮಧ್ಯಂತರ ತಡೆ ಹಿಂಪಡೆದ ಹೈಕೋರ್ಟ್
Tuesday, December 09, 2025
ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ವೇತನ ಸಹಿತ ಋತು ಚಕ್ರ ರಜೆ ಒದಗಿಸುವ ರಾಜ್ಯಸರ್ಕಾರದ ಅಧಿಸೂಚನೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಹಿಂಪಡೆದಿದೆ.
ರಾಜ್ಯಸರ್ಕಾರದ ಮನವಿಯನ್ನು ಪರಿಗಣಿಸಿ ಹೈಕೋರ್ಟ್ ಆದೇಶವನ್ನು ಹಿಂಪಡೆದಿದ್ದು, ಬುಧವಾರಕ್ಕೆ ವಿಚಾರಣೆ ಮುಂದೂಡಿದೆ. 2025ರ ನವೆಂಬರ್ 20ರಂದು ರಾಜ್ಯ ಕಾರ್ಮಿಕ ಇಲಾಖೆ ಹೊರಡಿಸಿದ ಅಧಿಸೂಚನೆಯನ್ನು ಪ್ರಶ್ನಿಸಿ ಬೆಂಗಳೂರಿನ ಹೊಟೇಲ್‌ಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿಯವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಬೆಳಗ್ಗೆ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ಕೋರಿಕೆಯಂತೆ ಕಾರ್ಮಿಕ ಇಲಾಖೆಯ ಅಧಿಸೂಚನೆಗೆ ತಡೆ ನೀಡಲಾಗಿದೆ. ರಾಜ್ಯ ಸರಕಾರವು ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ‍್ಯ ಹೊಂದಿದೆ ಎಂದು ಆದೇಶಿಸಿತು.ಈ ತಡೆಯಾಜ್ಞೆ ಹಿಂಪಡೆಯುವ0ತೆ ರಾಜ್ಯ ಸರಕಾರ ಮಾಡಿದ ಮನವಿ ಪರಿಗಣಿಸಿ ಹೈಕೋರ್ಟ್ ಆದೇಶವನ್ನು ಮಾರ್ಪಾಡು ಮಾಡಿದೆ.