-->
 ಉನ್ನಾವೋ ಅತ್ಯಾಚಾರಿಗೆ ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಉನ್ನಾವೋ ಅತ್ಯಾಚಾರಿಗೆ ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ


ಉನ್ನಾವೋ ಅತ್ಯಾಚಾರ ಪ್ರಕರಣದ ಅಪಾಧಿ ಕುಲದೀಪ್ ಸೆಂಗಾರ್‌ಗೆ ವಿಧಿಸಲಾಗಿದ್ದಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಷರತ್ತುಬದ್ಧ ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ ಹಾಗೂ ವಕೀಲರಾದ ಅಂಜಲಿ ಪಟೇಲ್, ಪೂಜಾ ಶಿಲ್ಪಕರ್ ಅವರು ಮೇಲ್ಮನವಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೆ.ಕೆ ಮಹೇಶ್ವರಿ, ಆಗಸ್ಟಿನ್ ಜಾರ್ಜ್ ವಸೀಹ್ ಅವರನ್ನೊಳಗೊಂದ ಪೀಠ, ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಗೆ ಸಂಬOಧಿಸಿದOತೆ ಸೆಂಗಾರ್‌ಗೆ ನೋಟಿಸ್ ನೀಡಿದೆ.

2017ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬOಧಿಸಿದOತೆ ದೆಹಲಿ ವಿಚಾರಣಾ ನ್ಯಾಯಾಲಯವು 2019ಲ್ಲಿ ಸೆಂಗರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಶಿಕ್ಷೆ ಪ್ರಶ್ನಿಸಿ ಸೆಂಗರ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ನಡೆಸಿದ್ದ ದೆಹಲಿ ಹೈಕೋರ್ಟ್, ಅರ್ಜಿ ಇತ್ಯರ್ಥವಾಗುವವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ, ಡಿಸೆಂಬರ್ 23ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅಮಾನತ್ತುಗೊಂಡಿದ್ದರೂ ಸಂತ್ರಸ್ತೆ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಸೆಂಗರ್‌ಗೆ 10 ವರ್ಷಗಳ ಶಿಕ್ಷೆಯಾಗಿದೆ. ಹೀಗಾಗಿ ಅವರು ಜೈಲಿನಲ್ಲೇ ಇರುವುದಾಗಿ ಹೇಳಿತ್ತು. ಇನ್ನು ಸೆಂಗರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಖಂಡಿಸಿ ಸಂತ್ರಸ್ತೆ, ಅವರ ತಾಯಿ ಮತ್ತು ಮಹಿಳಾ ಪರ ಹೋರಾಟಗಾರರು ದೆಹಲಿ ಹೈಕೋರ್ಟ್ ಎದುರು ಧರಣಿ ನಡೆಸಿದ್ದರು. 


Ads on article

Advertise in articles 1

advertising articles 2

Advertise under the article