ಕ್ರಿಸ್‌ಮಸ್ ರಜೆ ಹಿನ್ನೆಲೆ; ಉಡುಪಿಗೆ ಹರಿದು ಬಂದ ಪ್ರವಾಸಿಗರ ದಂಡು; ಸಂಚಾರ ದಟ್ಟಣೆ
ಕ್ರಿಸ್‌ಮಸ್ ರಜೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಪ್ರವಾಸೀ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿದೆ.
ಉಡುಪಿ ನಗರ, ಮಲ್ಪೆ, ಮಣಿಪಾಲ ಸೇರಿದಂತೆ ಹಲವು ರಸ್ತೆಗಳಲ್ಲಿ ಪ್ರತಿದಿನ ಟ್ರಾಫಿಕ್ ಜಾಮ್ ಕಿರಿಕಿರಿ ಎದುರಾಗುತ್ತಿದೆ. ಉಡುಪಿ ಶ್ರೀಕೃಷ್ಣ ಮಠ, ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ.
ಮಲ್ಪೆ ಕಡಲ ಕಿನಾರೆ, ಕಾಪು ಬೀಚ್, ಪಡುಬಿದ್ರೆ ಬೀಚ್, ಪಡುಕೆರೆ, ತ್ರಾಸಿ ಬೀಚ್‌ಗಳಲ್ಲಿ ಪ್ರವಾಸಿಗರು ತುಂಬಿ ಹೋಗಿದ್ದು, ಬೀಚ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಜಿಲ್ಲೆಯ ಬಹುತೇಕ ಲಾಡ್ಜ್ಗಳು, ಹೋಮ್‌ಸ್ಟೇ, ರೆಸಾರ್ಟ್ಗಳು ಫುಲ್ ಆಗಿವೆ. ಉಡುಪಿಯ ಬಹುತೇಕ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿದ್ದು, ಗಂಟೆಗಟ್ಟಲೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದೆ.
ಮಲ್ಪೆ ಬೀಚ್, ಸೀವಾಕ್, ಸೈಂಟ್ ಮೇರಿಸ್ ದ್ವೀಪಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿ ಸಂಭ್ರಮಿಸುತ್ತಿದ್ದಾರೆ. ಸೀವಾಕ್ ಬಳಿಯಿಂದ ಸೈಂಟ್ ಮೇರಿಸ್ ದ್ವೀಪಕ್ಕೆ ತೆರಳುವ ದೊಡ್ಡ ಬೋಟುಗಳು ಸುಮಾರು 20 ಟ್ರಿಪ್‌ಗಳನ್ನು ಮಾಡಿವೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 66ರ ಕರಾವಳಿ ಬೈಪಾಸ್‌ನಿಂದ ಮಲ್ಪೆ ಬೀಚ್‌ವರೆಗೆ ಎಲ್ಲ ರಸ್ತೆಗಳು ವಾಹನ ದಟ್ಟನೆಯಿಂದ ಕಿರಿಕಿರಿ ಅನುಭವಿಸುವಂತಾಗಿದೆ. ಪ್ರವಾಸಿಗರ ದಂಡು ಹೆಚ್ಚಾಗುತ್ತಿರುವುದರಿಂದ ಹೆಚ್ಚುವರಿ ಯಾಗಿ ಐದು ಕಡೆ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ.ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ಕೂಡ ನೇಮಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
