ರಸ್ತೆ ಮಧ್ಯೆ ಹೊತ್ತಿ ಉರಿದ ಡಸ್ಟರ್ ಕಾರು; ಪ್ರಯಾಣಿಕರು ಪಾರು
Saturday, December 06, 2025
ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಸಕಲೇಶಪುರ ತಾಲೂಕಿನ ಮಂಜ್ರಾಬಾದ್ ದರ್ಗಾ ಸಮೀಪ ನಡೆದಿದೆ.
ಬೆಂಗಳೂರು ನಿವಾಸಿಗಳಾದ ನವೀನ್ (32) ಮತ್ತು ಮಾನಸ(28) ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ. ಧರ್ಮಸ್ಥಳ ಮಾರ್ಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ, ಕಾರಿನ ಹಿಂದಿನ ಚಕ್ರ ಪಂಕ್ಚರ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ತಗುಲಿದೆ ಎಂದು ಹೇಳಲಾಗುತ್ತಿದೆ.
ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ತುರ್ತಾಗಿ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.