ಅಂತರ್ ಜಿಲ್ಲಾ ವಾಹನ ಕಳ್ಳನ ಬಂಧನ; ಶಿರ್ವ ಪೊಲೀಸರ ಕಾರ್ಯಾಚರಣೆ
Wednesday, December 31, 2025
ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳನನ್ನು ಶಿರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ. ಓಂ ಕೋಲಾರ ಬಂಧಿತ ಆರೋಪಿ. ಬಂಧಿತನಿOದ 5 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
. ಡಿ.5ರಂದು ಕೌಶಿಕ್ ಎಂಬವರು ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿತ್ತು. ಈ ಬಗ್ಗೆ ಅವರು ಶಿರ್ವ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿ ಓಂ ಕೋಲಾರ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿOದ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ್ದ 5 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ. ಹರ್ಷ ಪ್ರಿಯಂವದಾ ನಿರ್ದೇಶನದಂತೆ ಕಾಪು ವೃತ್ತ ನಿರೀಕ್ಷಕ ಅಜಮತ್ ಅಲಿ ನೇತೃತ್ವದಲ್ಲಿ ಶಿರ್ವ ಠಾಣಾ ಉಪನಿರೀಕ್ಷಕರಾದ ಮಂಜುನಾಥ ಮರಬದ, ಲೋಹಿತ್ ಕುಮಾರ್ ಸಿ ಎಸ್, ಸಿಬ್ಬಂದಿಯವರಾದ ಮಂಜುನಾಥ ಅಡಿಗ, ದಯಾನಂದ ಪ್ರಭು, ಅನ್ವರ್ ಅಲಿ, ಸಿದ್ದರಾಯಪ್ಪ, ಮಂಜುನಾಥ ಹೊಸಮನಿ, ಕಿರಣ್, ಶಿವಾನಂದಪ್ಪ, ಬಸವರಾಜ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
.jpeg)
.jpeg)