ಮಾದಕ ವಸ್ತು ಮಾರಾಟ; ಮೂವರು ಆರೋಪಿಗಳ ಬಂಧನ
Monday, December 08, 2025
ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಚಣಿ ಎಂಬಲ್ಲಿ ನಿಷೇದಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ರವೂಫ್ (30), ಶರೀಫ್ ಯಾನೆ ಅಮಿನ್ (34), ನಿಯಾಝ್ ( 23) ಬಂಧಿತ ಆರೋಪಿಗಳು.
ಬಂಧಿತರಿಂದ 42 ಗ್ರಾಂ ಎಂಡಿಎಂಎ, ಟೊಯೋಟಾ ಕಾರು, ಮೂರು ಮೊಬೈಲ್, 2500 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳ ಪೈಕಿ ನಿಯಾಜ್ ಮಾದಕ ವಸ್ತು ಖರೀದಿಸಲು ಬಂದಿದ್ದ ಎಂದು ತಿಳಿದು ಬಂದಿದೆ. ಪ್ರಕರಣದಲ್ಲಿ ಇನ್ನೊರ್ವ ಆರೋಪಿ ಸಲಾಮ್ ಎಂಬಾತ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.