🔥🔥 ಕುಂದಾಪುರದಲ್ಲಿ ಬೆಂಕಿ ಅವಘಡ; ಹಲವು ಅಂಗಡಿಗಳು ಸುಟ್ಟು ಭಸ್ಮ 🔥🔥
Monday, December 29, 2025
ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡವೊಂದರಲ್ಲಿ ಇಂದು ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿದೆ.
ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಪುಸ್ತಕದಂಗಡಿ ಸೇರಿದಂತೆ ಐದಾರು ಅಂಗಡಿಗಳಿಗೆ ಬೆಂಕಿ ಆವರಿಸಿದೆ. ಸೋಮವಾರ ಮುಂಜಾನೆ ಮೂರು ಗಂಟೆಗೆ ಘಟನೆ ನಡೆದಿದ್ದು, ಕುಂದಾಪುರ ಪೇಟೆಯ ವೆಂಕಟರಮಣ ದೇವಸ್ಥಾನದ ಎದುರು ರಥಬೀದಿಯಲ್ಲಿರುವ ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳು ನಾಶವಾಗಿವೆ ಎಂದು ತಿಳಿದು ಬಂದಿದೆ.


