ಬಾಲಕನನ್ನು ಹಗ್ಗದಿಂದ ಕಟ್ಟಿ ಹಾಕಿ ಲೈಂಗಿಕ ಕಿರುಕುಳ; ಆರೋಪಿಯ ಬಂಧನ
Sunday, December 07, 2025
ಚಾಕಲೇಟ್ ಖರೀದಿಸಲು ಅಂಗಡಿಗೆ ಬಂದಿದ್ದ ಅಪ್ರಾಪ್ತ ಬಾಲಕನನ್ನು ಕಟ್ಟಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ ಅಂಗಡಿ ಮಾಲಕನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಚೊಕ್ಕಬೆಟ್ಟು ಮಸೀದಿ ಬಳಿ ಇರುವ ಹನಿ ಫ್ಯಾಷನ್ ಅಂಗಡಿ ಮಾಲೀಕ, ರಾಜಕೀಯ ಪಕ್ಷವೊಂದರ ಸ್ಥಳೀಯ ಮುಖಂಡ ಮಹಮ್ಮದ್ ಇಸ್ಮಾಯಿಲ್ ಬಂಧಿತ ಆರೋಪಿ. ಫೋಕ್ಸೋ ಪ್ರಕರಣದಡಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಚೊಕ್ಕಬೆಟ್ಟು ನಿವಾಸಿ 6ನೇ ತರಗತಿಯ ಬಾಲಕ ಚಾಕಲೇಟ್ ಖರೀದಿಸುವುದಕ್ಕಾಗಿ ಆರೋಪಿಯ ಅಂಗಡಿಗೆ ಬಂದಿದ್ದ. ಈ ವೇಳೆ ಬಾಲಕನನ್ನು ಅಂಗಡಿಯ ರೂಮಿನೊಳಗೆ ಕೂಡಿ ಹಾಕಿ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಬಾಲಕನ ತಾಯಿ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಸುರತ್ಕಲ್ ಪೊಲೀಸರು, ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.