ಮೊಬೈಲ್ ಗಳಲ್ಲಿ “ಸಂಚಾರ್ ಸಾಥಿ” ಆಪ್ ಅಳವಡಿಕೆಗೆ ಪ್ರಿಯಾಂಕಾ ಗಾಂಧಿ ವಿರೋಧ
Tuesday, December 02, 2025
ದೇಶದಲ್ಲಿ ತಯಾರಾದ ಅಥವಾ ಆಮದು ಮಾಡಿಕೊಳ್ಳುವ ಎಲ್ಲಾ ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯ ಮಾಡಿರುವ ಕೇಂದ್ರದ ವಿರುದ್ಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸೈಬರ್ ವಂಚನೆ ವರದಿ ಮಾಡುವ ಕಾರ್ಯವಿಧಾನದ ಅಗತ್ಯತೆ ಇದೆ. ಆದರೆ, ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆ್ಯಪ್ ಅಳವಡಿಕೆ ಕಡ್ಡಾಯಗೊಳಿಸುವಿಕೆಯಿಂದ ಬಳಕೆದಾರರ ಗೌಪ್ಯತೆ ಉಲ್ಲಂಘಿಸುವ ಸಾಧ್ಯತೆ ಹೆಚ್ಚಿದೆ. ಬಿಜೆಪಿ ನಾಯಕರು ದೇಶವನ್ನು ಸರ್ವಾಧಿಕಾರ ರಾಷ್ಟ್ರವನ್ನಾಗಿ ಪರಿವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸೈಬರ್ ಭದ್ರತೆಯ ಕುರಿತು ಈಗಾಗಲೇ ವ್ಯಾಪಕ ಚರ್ಚೆ ನಡೆದಿದೆ. ವಂಚನೆ ಕುರಿತು ವರದಿ ಮಾಡುವುದಕ್ಕೆ ಸರಿಯಾದ ವ್ಯವಸ್ಥೆ ಅವಶ್ಯಕತೆಯಿದೆ. ಸಂಚಾರ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯಗೊಳಿಸಿರುವ ಕೇಂದ್ರದ ನಿಯಮವು ಮೊಬೈಲ್ ಬಳಕೆದಾರರ ಗೌಪ್ಯತೆ ಉಲ್ಲಂಘಿಸಿದಂತಾಗುತ್ತದೆ ಎಂದೂ ಅವರು ಕಿಡಿಕಾರಿದ್ದಾರೆ.