ಕರಾವಳಿಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ
Wednesday, December 03, 2025
ಕರಾವಳಿಯಾದ್ಯಂತ ಇಂದು(ಡಿ.3) ಸಂಜೆ ವೇಳೆಗೆ ಗುಡುಗು ಸಿಡಿಲು ಸಹಿತ ಬಿರುಸಿನ ಮಳೆಯಾಗಿದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಂಜೆ ಸುರಿದ ಮಳೆ ಇಳೆಯನ್ನು ತಂಪಾಗಿಸಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ವಾಯುಭಾರ ಕುಸಿತದಿಂದ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು.
ಏಕಾಏಕಿ ಸುರಿದ ಮಳೆಯಿಂದಾಗಿ ಕಚೇರಿ ಕೆಲಸ ಬಿಟ್ಟು ಮನೆಗೆ ತೆರಳುವವರು ಪರದಾಡುವಂತಾಯಿತು. ಹವಾಮಾನ ಇಲಾಖೆಯ ಪ್ರಕಾರ ಇನ್ನು 3 ದಿನ ಮಳೆಯಾಗಲಿದೆ.


