ಯುವಕರ ನಡುವೆ ಹೊಡೆದಾಟ; ಓರ್ವ ಸಾವು
Monday, December 15, 2025
ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಯುವಕ ಕೊಲೆಯಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆ ಎಂಬಲ್ಲಿ ನಡೆದಿದೆ.
ಪಡುಕರೆ ಸಂತೋಷ್ ಮೊಗವೀರ(30) ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬOಧಿಸಿ ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಶಬರಿಮಲೆ ಯಾತ್ರೆ ಮುಗಿಸಿ ಬಂದಿದ್ದ ಯುವಕರು ಡಿ.14ರ ರಾತ್ರಿ ಪಾರ್ಟಿ ಮಾಡಿದ್ದರು. ಮದ್ಯ ಸೇವಿಸಿ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದಿದೆ. ಸಂತೋಷ್ ಮೊಗವೀರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಆತ ಅಲ್ಲೇ ಕುಸಿದು ಬಿದ್ದಿದ್ರು. ತಕ್ಷಣ ಸ್ಥಳೀಯರೆಲ್ಲಾ ಸೇರಿ ಸಂತೋಷ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾರೆ.
ಘಟನಾಸ್ಥಳಕ್ಕೆ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ, ಕೋಟ ಠಾಣಾ ಉಪ ನಿರೀಕ್ಷಕ ಪ್ರವೀಣ್ ಕುಮಾರ್ ಸೇರಿದಂತೆ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.