ಅಕ್ರಮ ಗೋ ಸಾಗಾಟ; ಇಬ್ಬರ ಬಂಧನ
Tuesday, December 02, 2025
ಅಕ್ರಮ ಜಾನುವಾರು ಸಾಗಾಟ ಪ್ರಕರಣದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಸಜಿಪನಡು ನಿವಾಸಿಗಳಾದ ಆಶಿಕ್ ಪಾಷಾ (26) ಹಾಗೂ ಅಬ್ದುಲ್ ಲತೀಫ್ (25) ಬಂಧಿತ ಆರೋಪಿಗಳು. ನ.29 ರಂದು ಬೆಳಿಗ್ಗೆ ಪುತ್ತೂರು ನರಿಮೊಗರು ಪ್ರದೇಶದಲ್ಲಿ ನಡುರಸ್ತೆಯಲ್ಲೇ ಗೋವುಗಳನ್ನು ಬಿಟ್ಟು ಪರಾರಿಯಾಗಿದ್ದರು. ಅಕ್ರಮ ಗೋ ಸಾಗಾಟದ ವಾಹನ ರಸ್ತೆ ಮಧ್ಯೆ ಕೆಟ್ಟು ನಿಂತಿದ್ದು, ಜಾಜುನಾರುಗಳನ್ನು ರಸ್ತೆಯಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು. ಈ ಬಗ್ಗೆ ಪಾಣಾಜೆ ನಿವಾಸಿ ಪ್ರೇಮ್ರಾಜ್ ಅವರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದರು.
ಇದೀಗ ಆರೋಪಿಗಳನ್ನು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.