ಸರಣಿ ಅಪಘಾತ; ಲಾರಿ ಹಾಗೂ 2 ಕಾರುಗಳು ಜಖಂ, ಪಾದಚಾರಿ ಗಂಭೀರ
Monday, December 29, 2025
ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿ ಪಾದಚಾರಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಕಾರ್ಕಳದ ನಿಟ್ಟೆ ಪಂಚಾಯತ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ದಾವಣಗೆರೆಯಿಂದ ಮಂಗಳೂರಿಗೆ ಮೊಟ್ಟೆ ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ರಸ್ತೆ ಬದಿಯಲ್ಲಿ ತೆರಳುತ್ತಿದ್ದ ಪಾದಚಾರಿಯ ಮೇಲೆ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಪಾದಚಾರಿ ಗಂಭೀರ ಗಾಯಗೊಂಡಿದ್ದಾರೆ. ಇನ್ನು ಲಾರಿ ಹಿಂದೆ ಬರುತ್ತಿದ್ದ ಕಾರು ಕೂಡಾ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಒಂದು ಲಾರಿ ಹಾಗೂ ಎರಡು ಕಾರಿಗಳು ಜಖಂಗೊಂಡಿವೆ. ಅಪಘಾತದಿಂದಾಗಿ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಕ್ರೇನ್ ಮೂಲಕ ಲಾರಿಯನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

