ಉಡುಪಿ ಕೃಷ್ಣಮಠಕ್ಕೆ ನಟ ಪವನ್ ಕಲ್ಯಾಣ್ ಭೇಟಿ; ಗೀತೋತ್ಸವ ಸಮಾರೋಪದಲ್ಲಿ ಭಾಗಿ
Sunday, December 07, 2025
ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯುವ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಆಂಧ್ರ ಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಭಾಗಿಯಾದರು.
ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ್ದ ಪವನ್ ಕಲ್ಯಾಣ್, ಅಲ್ಲಿಂದ ಉಡುಪಿಯ ಪ್ರವಾಸಿ ಮಂದಿರಕ್ಕೆ ಆಗಮಿಸಿದರು. ಅಲ್ಲಿ ಊಟ ಮುಗಿಸಿ ಅವರು ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಮಾಡಿ ಸ್ವಾಮೀಜಿಗಳ ಜೊತೆ ಮಾತುಕತೆ ನಡೆಸಿದರು. ನಂತರ ಮಠದ ರಾಜಾಂಗಣದಲ್ಲಿ ನಡೆಯುವ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗಿಯಾದರು. ವೇದಿಕೆಯಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.


