ಮೈಸೂರು ವಿಭಾಗ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷ, ಕಾರ್ಯನಿರ್ವಹಣಾಧಿಕಾರಿಗಳಿಗೆ ತರಬೇತಿ (Video)
Tuesday, December 09, 2025
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು, ಹಾಸನ ಜಿಲ್ಲಾ ಸಹಕಾರ ಒಕ್ಕೂಟ ನಿ. ಹಾಗೂ ಸಹಕಾರ ಇಲಾಖೆ, ಹಾಸನ ಇದರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗದ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯಮಟ್ಟದ ತರಬೇತಿ ಶಿಬಿರವು ಹಾಸನದ ತಣ್ಣೀರುಹಳ್ಳದ ಹೋಟೇಲ್ ರಾಮ ಇಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು ಇದರ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ದೇಶದಲ್ಲಿ ಆರ್ಥಿಕ ವ್ಯವಸ್ಥೆಯ ಚಿಂತನೆ, ಬದಲಾವಣೆ ಹಾಗೂ ದೇಶ ಪ್ರಗತಿ ಪಥದತ್ತ ಸಾಗಬೇಕಾದರೆ ಸಹಕಾರಿ ಕ್ಷೇತ್ರದಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಹಾಸನ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಇದರ ನಿರ್ದೇಶಕ ಆರ್.ಟಿ ದೇವೇಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಹಾಸನ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಇದರ ಅಧ್ಯಕ್ಷ ಎಸ್.ಎನ್ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಹಾಸನ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಇದರ ಉಪಾಧ್ಯಕ್ಷ ಸೋಮೇಗೌಡ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭಾರತಿ, ಸಮನ್ವಯಾಧಿಕಾರಿ ಮಲ್ಲಯ್ಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
.jpeg)
.jpeg)
