-->
 ಬಳ್ಳಾರಿ ಗಲಭೆಗೆ ತಲೆದಂಡ; ಅಧಿಕಾರ ಸ್ವೀಕರಿಸಿದ 1 ದಿನಕ್ಕೆ ಎಸ್ಪಿ ಪವನ್ ನೆಜ್ಜೂರು ಸಸ್ಪೆಂಡ್

ಬಳ್ಳಾರಿ ಗಲಭೆಗೆ ತಲೆದಂಡ; ಅಧಿಕಾರ ಸ್ವೀಕರಿಸಿದ 1 ದಿನಕ್ಕೆ ಎಸ್ಪಿ ಪವನ್ ನೆಜ್ಜೂರು ಸಸ್ಪೆಂಡ್


ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಮಹರ್ಷಿ ಪ್ರತಿಮೆ ಪ್ರತಿಷ್ಠಾಪನೆ ವೇಳೆ ನಡೆದ ಹಿಂಸಾಚಾರ ಹಾಗೂ ಕಲ್ಲು ತೂರಾಟದ ಘಟನೆಗೆ ಸಂಬOಧಿಸಿದOತೆ ಕರ್ತವ್ಯ ಲೋಪದ ಆರೋಪದಡಿ ಬಳ್ಳಾರಿ ಜಿಲ್ಲಾ ಎಸ್ಪಿಯಾಗಿದ್ದ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಲಾಗಿದೆ

ಗಲಭೆ ಪರಿಸ್ಥಿತಿ ನಿಭಾಯಿಸುವಲ್ಲಿ ಪೊಲೀಸರು ವಿಫಲರಾಗಿದ್ದು, ಘಟನೆಯನ್ನು ಸರಿಯಾಗಿ ನಿಭಾಯಿಸಿಲ್ಲ. ಅಲ್ಲದೆ ಹಿರಿಯ ಅಧಿಕಾರಿಗಳ ಗಮನಕ್ಕೂ ತಂದಿಲ್ಲ ಎಂದು ಡಿಜಿ-ಐಜಿಪಿ ವರದಿ ನೀಡಿದ್ದು, ಪವನ್ ನೆಜ್ಜೂರು ಅವರನ್ನು ಅಮಾನತು ಮಾಡುವಂತೆ ಬಳ್ಳಾರಿ ಡಿಐಜಿ ವರ್ತಿಕಾ ಕಟಿಯಾರ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ ಈ ಕ್ರಮ ಕೈಗೊಂಡಿದೆ. ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು 1969 ರ ಅಡಿಯಲ್ಲಿ ಈ ಅಮಾನತು ಆದೇಶವನ್ನು ಹೊರಡಿಸಲಾಗಿದೆ.

ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿಯಾಗಿದ್ದ ಪವನ್ ನೆಜ್ಜೂರು ಅವರನ್ನು ರಾಜ್ಯ ಸರ್ಕಾರ ಬಳ್ಳಾರಿ ಎಸ್ಪಿಯಾಗಿ ವರ್ಗಾವಣೆ ಮಾಡಿತ್ತು. ಅದರಂತೆ ಜ.1ರಂದು ಅಧಿಕಾರ ವಹಿಸಿಕೊಂಡಿದ್ದರು.



Ads on article

Advertise in articles 1

advertising articles 2

Advertise under the article