ಪ್ಲೈವುಡ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಅವಘಡ; 1 ಕೋಟಿ ರೂ. ನಷ್ಟ
Monday, January 05, 2026
ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿನ ಪ್ಲೈವುಡ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ರಝಾಕ್ ಎಂಬವರಿಗೆ ಸೇರಿದ ಅಕೋಲೈಟ್ ಇಂಡಸ್ಟ್ರಿಯಲ್ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್ ಎಂಬ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಕಂಪೆನಿಯಲ್ಲಿದ್ದ ಪ್ಲೈವುಡ್‌ಗಳು ಸುಟ್ಟು ಭಸ್ಮವಾಗಿದ್ದು, ಸುಮಾರು 1 ಕೋಟಿರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಘಟನೆ ಬೆಳಗ್ಗಿನ ಜಾವ ನಡೆದಿರುವ ಪರಿಣಾಮ ಕೆಲಸಗಾರರು ಯಾರೂ ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ಮಾಹಿತಿ ತಿಳಿದ ಕೂಡಲೇ ಪಣಂಬೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಎಂ.ಸಿ.ಎಫ್, ಎನ್‌ಎಂಪಿಎ ಹಾಗೂ ಅಗ್ನಿಶಾಮಕದಳದ ನಾಲ್ಕು ಅಗ್ನಿ ಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿವೆ ಎಂದು ತಿಳಿದು ಬಂದಿದೆ.