-->
 ಬ್ಯಾನರ್ ವಿವಾದ ಗಲಾಟೆ; ಜನಾರ್ದನ ರೆಡ್ಡಿ, ಶ್ರಿರಾಮುಲು ಸೇರಿ 11 ಜನರ ವಿರುದ್ಧ ಎಫ್‌ಐಆರ್

ಬ್ಯಾನರ್ ವಿವಾದ ಗಲಾಟೆ; ಜನಾರ್ದನ ರೆಡ್ಡಿ, ಶ್ರಿರಾಮುಲು ಸೇರಿ 11 ಜನರ ವಿರುದ್ಧ ಎಫ್‌ಐಆರ್


ಬಳ್ಳಾರಿಯಲ್ಲಿ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬOಧಿಸಿ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿ 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವಾಲ್ಮೀಕಿ ಪುತ್ತಳಿ ಅನಾವರಣ ಹಿನ್ನೆಲೆ ಹಾಗೂ ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಸಂಬOಧ ಬಳ್ಳಾರಿಯ ಬ್ರೂಸ್‌ಫೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್ ಹಾಗೂ ಮಾರುತಿ ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲು ಗುರುವಾರ (ಜ.1) ಒಂದು ಗುಂಪು ಮುಂದಾಗಿತ್ತು. ಈ ವೇಳೆ ಗಲಾಟೆ ಪ್ರಾರಂಭವಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದರು. ಉದ್ವಿಗ್ನ ವಾತಾವರಣ ನಿರ್ಮಾಣವಾದ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಬಂದಿದ್ದಾರೆ. ಈ ಸಂದರ್ಭದಲ್ಲಿ ಎರಡು ಕಡೆ ಮಾತಿನ ಚಕಮಕಿ ನಡೆದು ಪೊಲೀಸರು ಲಾಠಿ ಚಾರ್ಜ್ ಮಾಡಿ, ಜನರನ್ನು ಚದುರಿಸಿದ್ದಾರೆ.

ಪೊಲೀಸರು ಲಾಠಿ ಚಾರ್ಜ್ ಮಾಡಿದರೂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಸಗಿ ಗನ್‌ಮ್ಯಾನ್‌ಗಳು ಫೈರಿಂಗ್ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ಈವರೆಗೂ ಕಾಂಗ್ರೆಸ್ ಕಾರ್ಯಕರ್ತನಿಗೆ ಗುಂಡಿನ ಹಾರಿಸಿದರು ಯಾರು ಎನ್ನುವುದು ತಿಳಿದು ಬಂದಿಲ್ಲ. ಇನ್ನೂ ಭರತ್ ರೆಡ್ಡಿ ಬೆಂಬಲಿಗ ಸತೀಶ ರೆಡ್ಡಿಗೆ ಗಂಭೀರ ಗಾಯವಾಗಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಗಲಾಟೆ ವಿಕೋಪದ ಬಳಿಕ ಪೊಲೀಸರು ರೆಡ್ಡಿ ಮನೆಯ ಬಳಿ 200 ಮೀಟರ್‌ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. 


Ads on article

Advertise in articles 1

advertising articles 2

Advertise under the article