ವಾಹನಗಳ ಸಿಸಿ ನೀಡದೇ ಸತಾಯಿಸುತ್ತಿರುವ ಆರ್‌ಟಿಓ ಕಚೇರಿ; ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ- ಕರಾವೇ
Thursday, January 29, 2026
ಉಡುಪಿಯ ಆರ್.ಟಿ.ಓ ಕಚೇರಿಯಲ್ಲಿ ಸುಮಾರು 8 ತಿಂಗಳಿನಿAದ ವಾಹನಗಳ ನಿರಾಕ್ಷೇಪಣಾ ಪತ್ರಗಳನ್ನು ನೀಡದೇ ಸತಾಯಿಸುತ್ತಿದ್ದು, ಬಾಕಿ ಉಳಿದಿರುವ ಕಡತಗಳನ್ನು 15 ದಿನಗಳೊಳಗೆ ವಿಲೇವಾರಿ ಮಾಡದೇ ಇದ್ದಲ್ಲಿ ಅನಿದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ ಹೇಳಿದ್ದಾರೆ.
ಉಡುಪಿಯಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ತಾಂತ್ರಿಕ ಕಾರಣಗಳನ್ನು ನೀಡಿ ಕಳೆದ 8 ತಿಂಗಳಿನಿOದ ವಾಹನಗಳ ನಿರಾಕ್ಷೇಪಣಾ ಪತ್ರ ನೀಡುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇವಲ 580 ರೂಪಾಯಿ ಶುಲ್ಕ ಕಟ್ಟಿ ಮೊಬೈಲ್ ಆಪ್ ನಲ್ಲಿಯೇ ಬಿಟ್ಟು ಹೋಗಿರುವ ಅಂಶಗಳನ್ನು ತುಂಬಿಸಿ ಕೇವಲ 5 ದಿನದಲ್ಲಿ ಹೊಸ ಆರ್ ಸಿ ಪತ್ರವನ್ನು ತರಿಸಿಕೊಡುತ್ತಾರೆ. ಆದರೆ ಉಡುಪಿ ಜಿಲ್ಲೆಯಲ್ಲಿ ಆರ್‌ಟಿಓ ಅಧಿಕಾರಿಗಳು ಈ ಕೆಲಸವನ್ನು ಮಾಡುತ್ತಿಲ್ಲ. ಇಲಾಖೆಯ ಬೇಜವಬ್ದಾರಿತನಕ್ಕೆ ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಗಿದೆ. 15 ದಿನಳೊಳಗೆ ಸಮಸ್ಯೆಗೆ ಪರಿಹಾರ ಸಿಗದೇ ಇದ್ದಲ್ಲಿ ಆರ್‌ಟಿಓ ಕಚೇರಿ ಎದುರು ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದರು.