-->
  ಸ್ವರ್ಣ ನದಿಯಲ್ಲಿ ಅಕ್ರಮ ಮರಳುಗಾರಿಕೆ; 17 ದೋಣಿಗಳ ವಶ

ಸ್ವರ್ಣ ನದಿಯಲ್ಲಿ ಅಕ್ರಮ ಮರಳುಗಾರಿಕೆ; 17 ದೋಣಿಗಳ ವಶ


ಬ್ರಹ್ಮಾವರ ಪೊಲೀಸ್ ವ್ಯಾಪ್ತಿಯ ಹಾವಂಜಿ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದ ಸ್ವರ್ಣ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿದ ಬ್ರಹ್ಮಾವರ ಪೊಲೀಸರು ಒಟ್ಟು 17 ದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ವಿವಿಧೆಡೆ ದೋಣಿಗಳನ್ನು ಬಳಸಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ದೊರೆತ ಮಾಹಿತಿಯಂತೆ ದಾಳಿ ನಡೆಸಿದ ಬ್ರಹ್ಮಾವರ ಪೊಲೀಸರು, ಹಾವಂಜಿ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದ ಸ್ವರ್ಣ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ 17 ದೋಣಿಗಳನ್ನು ವಶ ಪಡಿಸಿಕೊಂಡಿದ್ದಾರೆ. ಉಡುಪಿ ಎಸ್ಪಿ ಹರಿರಾಂ ಶಂಕರ್ ನಿರ್ದೇಶನದಂತೆ ಹೆಚ್ಚುವರಿ ಎಸ್ಪಿ ಸುಧಾಕರ ನಾಯ್ಕ, ಡಿವೈಎಸ್ಪಿ ಪ್ರಭು ಡಿ.ಟಿ. ಮತ್ತು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಮಾರ್ಗದರ್ಶನದಲ್ಲಿ ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಈ ಕಾರ್ಯಾಚರಣೆ ಪಾಲ್ಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article