ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್‌ನ್ಯೂಸ್; ಸದ್ಯದಲ್ಲೇ ಕೈಸೇರಲಿದೆ 2 ತಿಂಗಳ ಹಣ
Tuesday, January 20, 2026
ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ. ಸದ್ಯದಲ್ಲೇ ಬಾಕಿ ಉಳಿದಿರುವ ಎರಡು ತಿಂಗಳ ಕಂತಿನ ಹಣ 4 ಸಾವಿರ ರೂಪಾಯಿಯನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ವೀರಭೂಮಿ ಸ್ಮಾರಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದರು. ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ 2 ತಿಂಗಳ ಕಂತನ್ನು ಬಿಡುಗಡೆ ಮಾಡಿದ್ದಾರೆ. ಇನ್ನುಳಿದ ಎರಡು ತಿಂಗಳ ಕಂತಿನ ಹಣವನ್ನು ಸದ್ಯದಲ್ಲೇ ಬಿಡುಗಡೆ ಮಾಡುವುದಾಗಿ ತಿಳಿಸಿದರು.