-->
 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ


ಪ್ರಕರಣವೊಂದರಲ್ಲಿ ಭಾಗಿಯಾಗಿ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.

ಮೂಲ್ಕಿ ಕೊಲ್ನಾಡು ಕೆ.ಎಸ್. ರಾವ್ ನಗರ ನಿವಾಸಿ ಪ್ರಹ್ಲಾದ್ (19) ಬಂಧಿತ ಆರೋಪಿ. ಪ್ರಹ್ಲಾದ್ ವಿರುದ್ಧ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 78/2023ರಲ್ಲಿ ಕಲಂ 306, 34ಐಪಿಸಿಗಳಡಿ ಪ್ರಕರಣ ದಾಖಲಾಗಿತ್ತು. ಈ ಸಂಬOಧ ಆರೋಪಿಯ ಬಂಧನಕ್ಕಾಗಿ ನ್ಯಾಯಾಲಯವು ಹಲವು ಬಾರಿ ದಸ್ತಗಿರಿಯ ವಾರೆಂಟ್ ಹೊರಡಿಸಿತ್ತು. ಆದರೆ ಎರಡು ವರ್ಷಗಳಿಂದ ಆರೋಪಿಯು ತಲೆ ಮರೆಸಿಕೊಂಡಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. 


 

Ads on article

Advertise in articles 1

advertising articles 2

Advertise under the article