ಶೀರೂರು ಪರ್ಯಾಯ; 20 ಕಡೆ ಮೊಬೈಲ್ ಶೌಚಾಲಯ ಅಳವಡಿಕೆ (Video)
Monday, January 12, 2026
2026ರ ಶೀರೂರು ಪರ್ಯಾಯೋತ್ಸವದ ವೇಳೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 20 ಕಡೆಗಳಲ್ಲಿ ಮೊಬೈಲ್ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದು ಉಡುಪಿ ನಗರಸಭೆ ಆಯುಕ್ತ ಮಹಾಂತೇಶ್ ಹೇಳಿದರು.
ಶೀರೂರು ಪರ್ಯಾಯ ಅಂಗವಾಗಿ ನಗರಸಭೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸ್ವಚ್ಛತಾ ಕಾರ್ಯಕ್ಕೆ ಬೇಕಾಗುವ ಹೆಚ್ಚುವರಿ ಕಾರ್ಮಿಕರು ಹಾಗೂ ವಾಹನಗಳನ್ನು ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಹಗಲು ರಾತ್ರಿ ಪಾಳಿಯಲ್ಲಿ ಸ್ವಚ್ಛತಾ ಕಾರ್ಯಕ್ರಮªನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಪರ್ಯಾಯ ಕಾರ್ಯಕ್ರಮಕ್ಕೆ ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಅನುಕೂಲಕ್ಕಾಗಿ 20 ಮೊಬೈಲ್ ಶೌಚಾಲಯಗಳನ್ನು ನಿರ್ಮಿಸಲಾಗುವುದು. ಈಗಾಗಲೇ 4 ಮೊಬೈಲ್ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಜ. 17ರಂದು ನಡೆಯಲಿರುವ ಪರ್ಯಾಯೋತ್ಸವದ ಸಂದರ್ಭ ಕುಡಿಯುವ ನೀರಿನ ವ್ಯವಸ್ಥೆಯನ್ನು ಕೂಡಾ ನಗರಸಭೆ ವತಿಯಿಂದ ಮಾಡಲಾಗುವುದು. ಹೊರರಾಜ್ಯದ ಪ್ರವಾಸಿಗರಗೆ ಅನುಕೂಲವಾಗುವ ನಿಟ್ಟಿನಲ್ಲಿ ಫಲಕಗಳನ್ನು ಕೂಡಾ ಅಳವಡಿಸಲಾಗುತ್ತಿದೆ. ಪೊಲೀಸ್ ಇಲಾಖೆ ಗುರುತಿಸಿದ ಪಾರ್ಕಿಂಗ್ ಸ್ಥಳಗಳನ್ನು ಈಗಾಗಲೇ ನಗರಸಭೆ ವತಿಯಿಂದ ಶುಚಿಗೊಳಿಸುವ ಕೆಲಸ ಈಗಾಗಲೇ ನಡೆದಿದೆ ಎಂದರು.