ಜ.26: ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ
Wednesday, January 21, 2026
ಜೆಸಿಐ ಪರ್ಕಳ, ಶ್ರೀ ವಿಘ್ನೇಶ್ವರ ಸಭಾಭವನ ಪರ್ಕಳ, ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇ ಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರವು ಜ. 26ರಂದು ಸೋಮವಾರ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:00 ಗಂಟೆಯ ವರೆಗೆ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಲಿದೆ.
ಶಿಬಿರದಲ್ಲಿ ಕಣ್ಣಿನ ತಪಾಸಣೆ ಡಯಾಬಿಟಿಕ್ ರೆಟಿನೋ ಮತ್ತು ಗ್ಲುಕೋಮ ತಪಾಸಣೆ ನಡೆಸಲಾಗುವುದು. ಅಗತ್ಯ ಉಳ್ಳವರಿಗೆ ರಿಯಾಯಿತಿ ದರದಲ್ಲಿ ಕನ್ನಡಕ ವಿತರಿಸಲಾಗುವುದು. ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಉಚಿತವಾಗಿ ಮಾಡಲಾಗುವುದು. ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರಿಗೆ ಗೊತ್ತುಪಡಿಸಿದ ದಿನಾಂಕದOದು ಉಡುಪಿಯ ಪ್ರಸಾದ್ ನೇತ್ರಾಲಯದಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿ ಮರುದಿನ ಕಳುಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.