36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
Wednesday, January 07, 2026
ಕಳೆದ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಕರಣವೊಂದರ ವಾರಂಟ್ ಆರೋಪಿ ರವೀಂದ್ರ ಎಂಬಾತನನ್ನು ಕಾರ್ಕಳದ ನಲ್ಲೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯ ಅ.ಕ್ರ. 68/1989 ಕಲಂ 341, 323, 326 ಹಾಗೂ 34 ಐಪಿಸಿ, ಸಿಸಿ ನಂ. 1720/1990, ಸಿಆರ್ ನಂ. LPC 04/1992 ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರವೀಂದ್ರ ಕಳೆದ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ.
ಆರೋಪಿಯನ್ನು ಕಾರ್ಕಳ ತಾಲೂಕಿನ ನಲ್ಲೂರು ಪ್ರದೇಶದಲ್ಲಿ ದಸ್ತಗಿರಿ ಮಾಡಲಾಗಿದ್ದು, ಡಿ.6 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.