ಗಾಂಜಾ ಮಾರಾಟ; ಆರೋಪಿಯ ಬಂಧನ, 400 ಗ್ರಾಂ ಗಾಂಜಾ ವಶ
Saturday, January 03, 2026
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪುತ್ತೂರು ಕಸಬಾ ಗ್ರಾಮದ ನಿವಾಸಿ ಮಹಮ್ಮದ್ ತೌಸೀಫ್ (36) ಎಂದು ಗುರುತಿಸಲಾಗಿದೆ.
ಜನವರಿ 1ರಂದು ಬೆಳಿಗ್ಗೆ ಗಾಂಜಾ ಮಾರಾಟ ಮಾಡುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದಲ್ಲಿ ಪುತ್ತೂರು ನಗರ ಠಾಣೆಯ ಪಿ.ಎಸ್.ಐ ಜನಾರ್ಧನ ಕೆ.ಎಂ ಅವರು ಸಿಬ್ಬಂದಿಗಳೊOದಿಗೆ ಸ್ಥಳಕ್ಕೆ ತೆರಳಿ ಸಂಶಯಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದ ತೌಸಿಫ್‌ನನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ತನ್ನ ಬಳಿ ನಿಷೇಧಿತ ಗಾಂಜಾ ಇರುವುದಾಗಿ ಒಪ್ಪಿಕೊಂಡಿದ್ದಾನೆ. ಆತನಿಂದ ಸುಮಾರು 400 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಸಂಬOಧ ಅ.ಕ್ರ. 02/2026 ಕಲಂ 8(ಸಿ), 20(ಬಿ) ಎನ್‌ಡಿಪಿಎಸ್ ಕಾಯ್ದೆ 1985ರಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.