-->
ಉಡುಪಿ ಪರ್ಯಾಯಕ್ಕೆ 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸಲು ಸಚಿವೆ ಹೆಬ್ಬಾಳ್ಕರ್ ನಿರ್ದೇಶನ

ಉಡುಪಿ ಪರ್ಯಾಯಕ್ಕೆ 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸಲು ಸಚಿವೆ ಹೆಬ್ಬಾಳ್ಕರ್ ನಿರ್ದೇಶನ


ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಸಚಿವರು, ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಂವಾದದಲ್ಲಿ ಶಾಸಕ ಸುನಿಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳಿ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. 






Ads on article

Advertise in articles 1

advertising articles 2

Advertise under the article