ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ಸಾವು, 6 ಮಂದಿ ಗಂಭೀರ
Wednesday, January 07, 2026
ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಘಟನೆಯಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ ಆರು ಜನರನ್ನು ಝೀರೋ ಟ್ರಾಫಿಕ್‌ನಲ್ಲಿಯೇ ಬೈಲಹೊಂಗಲದಿAದ ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.