ಭೀಕರ ಅಪಘಾತ: ಮೂವರ ದುರ್ಮರಣ, 8 ಮಂದಿ ಗಂಭೀರ
Friday, January 23, 2026
ಬಸ್ ಹಾಗೂ ತೂಫಾನ್ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ಮೀಯಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಘಟನೆಯಲ್ಲಿ 8 ಮಂದಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

