ತಜ್ಞರ ಸಮಿತಿ ವರದಿ ನೀಡುವವರೆಗೆ ಸಿದ್ದಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಸ್ಥಗಿತ: ಹೆಬ್ಬಾಳಕರ್
Sunday, January 25, 2026
ಸಿದ್ದಾಪುರ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದಿಂದ ತಜ್ಞರ ಸಮಿತಿಯ ಅಭಿಪ್ರಾಯ ಪಡೆಯಲು ಸೂಚಿಸಿದ್ದು, ಸಮಿತಿಯ ವರದಿಯ ಆಧಾರದ ಮೇಲೆ ಸಾಧಕ ಭಾದಕಗಳ ಕುರಿತು ಗಮನ ಹರಿಸಿ, ರೈತರಿಗೆ ಯಾವುದೇ ಅನ್ಯಾಯವಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ತಜ್ಞರ ತಂಡ ವರದಿ ನೀಡುವ ತನಕ ಕಾಮಗಾರಿಯನ್ನು ಸ್ಥಗಿತಗೊಳಿಸಲು ಕರ್ನಾಟಕ ನೀರಾವರಿ ನಿಗಮದಿಂದ ಆದೇಶಿಸಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.