ರಾಸಲೀಲೆ ಪ್ರಕರಣ; ಡಿಜಿಪಿ ರಾಮಚಂದ್ರ ರಾವ್ ಅಮಾನತು
Tuesday, January 20, 2026
ಡಿಜಿಪಿ ಕೆ.ರಾಮಚಂದ್ರರಾವ್ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬOಧಿಸಿದOತೆ ಗೃಹ ಇಲಾಖೆಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆ ಸಮವಸ್ತ್ರದಲ್ಲಿರುವಾಗ ನಡೆದಿರುವ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿತ್ತು.ವಿಡಿಯೊ ಬಗ್ಗೆ ಸ್ಪಷ್ಟನೆ ನೀಡಲು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ನಿವಾಸಕ್ಕೆ ರಾಮಚಂದ್ರ ರಾವ್ ತೆರಳಿದಾಗ ಅವರನ್ನು ಭೇಟಿಯಾಗಲು ಸಚಿವರು ನಿರಾಕರಿಸಿದ್ದರು. ಇದೀಗ ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶಿಸಿದೆ.