ದಲಿತ ಮಹಿಳೆಯ ಕೊಲೆಗೈದ ಆರೋಪಿ ರಫೀಕ್ ಆತ್ಮಹತ್ಯೆ
Sunday, January 04, 2026
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಾಳಮ್ಮನಗರದಲ್ಲಿ ದಲಿತ ಮಹಿಳೆಯನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದ ಆರೋಪಿ ರಫೀಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ..
ರಾಮಾಪುರ ಸರಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರಂಜಿತಾ ಮಲ್ಲಪ್ಪ ಬನಸೋಡೆ (30) ಅವರನ್ನು ರಫೀಕ್ ಇಮಾಮಸಾಬ ಯಳ್ಳೂರ (30) ಕೊಲೆಗೈದು ಪರಾರಿಯಾಗಿದ್ದ.ಕಾಡಿಗೆ ಪರಾರಿಯಾಗಿದ್ದ ರಫೀಕ್ ಕಾಜಲವಾಡದ ಬಳಿ ಸಾವನಪ್ಪಿದ್ದಾನೆ.
ಮದುವೆಯಾಗಿ ವಿಚ್ಛೇದನ ಹೊಂದಿದ್ದ ರಂಜಿತಾಗೆ ರಫೀಕ್ ಅನೇಕ ವರ್ಷಗಳಿಂದ ಪರಿಚಿತನಾಗಿದ್ದು, ತನ್ನನ್ನು ಪ್ರೀತಿಸಿ ಮದುವೆಯಾಗುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಇದಕ್ಕೆ ನಿರಾಕರಿಸಿದ ರಂಜಿತಾ ಆತನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ್ದರು. ಇದರಿಂದ ಸಿಟ್ಟಿಗೆದ್ದ ಆರೋಪಿ ರಫೀಕ್, ರಂಜಿತಾ ಕೆಲಸ ಮುಗಿಸಿ ಶಾಲೆಯಿಂದ ಬರುತ್ತಿರುವ ಸಂದರ್ಭಆಕೆಯನ್ನು ಅಡ್ಡಗಟ್ಟಿದ್ದು, ಈ ವೇಳೆ ಇಬ್ಬರ ನಡುವೆ ವಾದ ವಿವಾದ ನಡೆದಿದೆ. ಈ ವೇಳೆ ಆರೋಪಿ ರಫೀಕ್ ಹರಿತವಾದ ಆಯುಧದಿಂದ ರಂಜಿತಾಳ ಕತ್ತು ಸೀಳಿ ಅರಣ್ಯದೊಳಗೆ ಓಡಿ ಪರಾರಿಯಾಗಿದ್ದ.