-->
ಶಿಕ್ಷಣ ತಜ್ಞ, ನಿಟ್ಟೆ ಶೈಕ್ಷಣಿಕ ಸಂಸ್ಥೆಗಳ ಕುಲಾಧಿಪತಿ ವಿನಯ್ ಹೆಗ್ಡೆ ನಿಧನ

ಶಿಕ್ಷಣ ತಜ್ಞ, ನಿಟ್ಟೆ ಶೈಕ್ಷಣಿಕ ಸಂಸ್ಥೆಗಳ ಕುಲಾಧಿಪತಿ ವಿನಯ್ ಹೆಗ್ಡೆ ನಿಧನ


ಶಿಕ್ಷಣ ತಜ್ಞ, ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ವಿನಯ್ ಹೆಗ್ಡೆ (86) ಹೃದಯಾಘಾತದಿಂದ ಗುರುವಾರ ನಿಧನರಾದರು. ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. 

ಮೃತದೇಹದ ಸಾರ್ವಜನಿಕ ದರ್ಶನಕ್ಕೆ ಶಿವಭಾಗ್‌ನಲ್ಲಿರುವ ಅವರ ನಿವಾಸದಲ್ಲಿ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಾಗೂ ದೇರಳಕಟ್ಟೆಯ ನಿಟ್ಟೆ ಕ್ಯಾಂಪಸ್‌ನಲ್ಲಿ ಸಂಜೆ 4.30ರಿಂದ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ದಿ. ಕೆ.ಎಸ್. ಹೆಗ್ಡೆ ಅವರ ಎರಡನೇ ಪುತ್ರ ವಿನಯ್ ಹೆಗ್ಡೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ದೊಡ್ಡದು. ಅವರು ಸ್ಥಾಪಿಸಿರುವ ನಿಟ್ಟೆ ಶಿಕ್ಷಣ ಸಂಸ್ಥೆಯಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಹಾಗೂ ಇನ್ನಿತರ ಕೋರ್ಸ್ ಗಳು ಇವೆ. ಇತ್ತೀಚೆಗೆ ನಿಟ್ಟೆ ಶಿಕ್ಷಣ ಸಂಸ್ಥೆಗೆ ಪರಿಗಣಿತ ವಿವಿ ಮಾನ್ಯತೆ ದೊರೆತಿದೆ. ವಿನಯ್ ಹೆಗ್ಡೆ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ

Ads on article

Advertise in articles 1

advertising articles 2

Advertise under the article