ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
Tuesday, January 06, 2026
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ದಿಲ್ಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದ್ದು, ಹೃದ್ರೋಗ ತಜ್ಞರು ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ.
ದೀರ್ಘಕಾಲದ ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಸರ್ ಗಂಗಾ ರಾಮ್ ಆಸ್ಪತ್ರೆಗೆ ತಪಾಸಣೆಗಾಗಿ ಭೇಟಿ ನೀಡುತ್ತಿದರು. ಅನಾರೋಗ್ಯ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.