ಮಾದಕ ವಸ್ತು ಮಾರಾಟಕ್ಕೆ ಯತ್ನ; ಆರೋಪಿಯ ಬಂಧನ
Monday, January 19, 2026
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಬಂಧಿತ ಆರೋಪಿ. ಈತನಿಂದ 5.20 ಗ್ರಾಂ ತೂಕದ ಎಂಡಿಎOಎ ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಬೈಕ್ ಸಮೇತ ಒಟ್ಟು 70,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಪದವು ಗ್ರಾಮದ ಕೈಲಾಸ ಕಾಲನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಬಳಿ ಯುವಕನೋರ್ವ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.