ಉಡುಪಿ ಜಿಲ್ಲೆಯಲ್ಲಿ ಡಿಜಿಟಲ್ ಇ-ಸ್ಟ್ಯಾಂಪಿಂಗ್ ತರಬೇತಿ
Wednesday, January 07, 2026
ಡಿಜಿಟಲ್ ಇ-ಸ್ಟ್ಯಾಂಪಿಂಗ್ ವ್ಯವಸ್ಥೆಯನ್ನು ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಉಪನೋಂದಣಾಧಿಕಾರಿ ಕಛೇರಿಯಲ್ಲಿ ಡಿಜಿಟಲ್ ಇ-ಸ್ಟ್ಯಾಂಪಿಂಗ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ತರಬೇತಿಯಲ್ಲಿ ದಸ್ತಾವೇಜು ಬರಹಗಾರರು, ವಕೀಲರು, ಇ-ಸ್ಟ್ಯಾಂಪ್ ಮಾರಾಟಗಾರರು, ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳ ಸಿಬ್ಬಂದಿಗಳು ಹಾಗೂ ಆಸಕ್ತ ಸಾರ್ವಜನಿಕರು ಭಾಗವಹಿಸಬಹುದಾಗಿದೆ.
ಜನವರಿ 8 ರಂದು ಉಡುಪಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆ, ಬ್ರಹ್ಮಾವರ ಕಚೇರಿಯಲ್ಲಿ ಸಂಜೆ 4.30 ರಿಂದ 5.30, ಜನವರಿ 9 ರಂದು ಕುಂದಾಪುರದಲ್ಲಿ ಮಧ್ಯಾಹ್ನ 12 ರಿಂದ 1 ಗಂಟೆ , ಬೈಂದೂರಿನಲ್ಲಿ ಸಂಜೆ 4 ರಿಂದ 5, ಜನವರಿ 12 ರಂದು ಶಂಕರನಾರಾಯಣದಲ್ಲಿ ಸಂಜೆ 4 ರಿಂದ 5, ಕಾರ್ಕಳ ಕಚೇರಿಯಲ್ಲಿ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ತರಬೇತಿ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ಹಾಗೂ ಮುದ್ರಾಂಕಗಳ ಉಪ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.